ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಜನಪ್ರಿಯವಾಗಿದ್ದ ಖಾಸಗಿ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು ಸಾಮಾನ್ಯ ಜನರ ಜೀವನದ ಒಂದು ಭಾಗವೇ ಆಗಿತ್ತು.

ಆದರೆ ಈಗ ಮಹೇಶ್ ಬಸ್ ನ ಮಾಲಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಎಲ್ಲರಿಗೂ ಆಘಾತ ಉಂಟು ಮಾಡಿದೆ. ಮಹೇಶ್ ಬಸ್ ಮಾಲೀಕ ಜಯರಾಮ ಅವರ ಪುತ್ರರಾಗಿರುವ ಪ್ರಕಾಶ್ ಶೆಟ್ಟಿ ತಾನು ವಾಸಿಸುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕಾಶ್ ಶೆಟ್ಟಿ ಕದ್ರಿ ಕಂಬಳ ಸಮೀಪ ಇರುವ ಮೊರಿಸ್ಕಾ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರೇ; ಇನ್ನೂ ಕೆಲವರು ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳಿದ್ದುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತನೂ ಹೇಳುತ್ತಾ ಇದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.



