ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ, ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಪ್ರತಿಭಟನೆ; ಶಾಸಕರಿಗೆ ಅಭಿವೃದ್ಧಿಯ ಭಾಷೆ ಗೊತ್ತಿಲ್ಲ – ಇನಾಯತ್ ಅಲಿ

ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಜಿಲ್ಲೆಯ ಸಂಸದರ ಭರವಸೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಕೂಳೂರು ಸೇತುವೆ ಸಂಚಾರಕ್ಕೆ ಸಮರ್ಥವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಾಲ್ಕು ವರ್ಷಗಳ‌ ಹಿಂದೆಯೇ ವರದಿ ನೀಡಿದ್ದರೂ ಹೊಸ ಸೇತುವೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಪಂಪ್‌ವೆಲ್ ಸೇತುವೆ ಮಾಡಲು ಹತ್ತು ವರ್ಷ ಬೇಕಾಯಿತು, ಇನ್ನು ಕೆಪಿಟಿ, ನಂತೂರು ಸೇತುವೆ ಮಾಡಲು ಇಪ್ಪತ್ತು ವರ್ಷ ಬೇಕಾಗಬಹುದೆ’ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ ಅವರು ಪ್ರಶ್ನಿಸಿದರು.

‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಒಂದೆರಡು ವರ್ಷದಲ್ಲಿ‌ ಸೇತುವೆ ಮಾಡಬೇಡಿ’ ಎಂದು ವ್ಯಂಗ್ಯವಾಗಿ ಹೇಳಿದರು. ‘ಇಲ್ಲಿನ ಶಾಸಕರಿಗೆ ಈ ಬಗ್ಗೆ ಕಿಂಚಿತ್ತು ಕಾಳಜಿಯೇ ಇಲ್ಲ, ಶಾಸಕರಿಗೆ ಅಭಿವೃದ್ಧಿಯ ಭಾಷೆಯೇ ಗೊತ್ತಿಲ್ಲ, ಅವರದ್ದು ಪ್ರಚೋದನಕಾರಿ ಭಾಷೆ ಮಾತ್ರ’ ಎಂದು ಇನಾಯತ್ ಅಲಿ ಮಾತನಾಡಿದರು.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಕಾರ್ಪೋರೆಟರ್ ಅನಿಲ್ ಕುಮಾರ್, ಮುಖಂಡರಾದ ಪ್ರತಿಭಾ ಕುಳಾಯಿ, ಗೋವರ್ಧನ್ ಶೆಟ್ಟಿಗಾರ್, ಪದ್ಮನಾಭ ಅಮೀನ್, ಬಿ.ಕೆ. ತಾರಾನಾಥ್, ರಾಜೇಶ್ ಕುಳಾಯಿ, ರೆಹಮಾನ್ ಖಾನ್ ಕುಂಜತ್ತಬೈಲ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!