ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಜಿಲ್ಲೆಯ ಸಂಸದರ ಭರವಸೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಕೂಳೂರು ಸೇತುವೆ ಸಂಚಾರಕ್ಕೆ ಸಮರ್ಥವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಾಲ್ಕು ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಹೊಸ ಸೇತುವೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಪಂಪ್‌ವೆಲ್ ಸೇತುವೆ ಮಾಡಲು ಹತ್ತು ವರ್ಷ ಬೇಕಾಯಿತು, ಇನ್ನು ಕೆಪಿಟಿ, ನಂತೂರು ಸೇತುವೆ ಮಾಡಲು ಇಪ್ಪತ್ತು ವರ್ಷ ಬೇಕಾಗಬಹುದೆ’ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ ಅವರು ಪ್ರಶ್ನಿಸಿದರು.
‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಒಂದೆರಡು ವರ್ಷದಲ್ಲಿ ಸೇತುವೆ ಮಾಡಬೇಡಿ’ ಎಂದು ವ್ಯಂಗ್ಯವಾಗಿ ಹೇಳಿದರು. ‘ಇಲ್ಲಿನ ಶಾಸಕರಿಗೆ ಈ ಬಗ್ಗೆ ಕಿಂಚಿತ್ತು ಕಾಳಜಿಯೇ ಇಲ್ಲ, ಶಾಸಕರಿಗೆ ಅಭಿವೃದ್ಧಿಯ ಭಾಷೆಯೇ ಗೊತ್ತಿಲ್ಲ, ಅವರದ್ದು ಪ್ರಚೋದನಕಾರಿ ಭಾಷೆ ಮಾತ್ರ’ ಎಂದು ಇನಾಯತ್ ಅಲಿ ಮಾತನಾಡಿದರು.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಕಾರ್ಪೋರೆಟರ್ ಅನಿಲ್ ಕುಮಾರ್, ಮುಖಂಡರಾದ ಪ್ರತಿಭಾ ಕುಳಾಯಿ, ಗೋವರ್ಧನ್ ಶೆಟ್ಟಿಗಾರ್, ಪದ್ಮನಾಭ ಅಮೀನ್, ಬಿ.ಕೆ. ತಾರಾನಾಥ್, ರಾಜೇಶ್ ಕುಳಾಯಿ, ರೆಹಮಾನ್ ಖಾನ್ ಕುಂಜತ್ತಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…