ಬಂಟ್ವಾಳ : ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…