ಬಂಟ್ವಾಳ: ಕಲ್ಲಡ್ಕದಲ್ಲಿ ನಿತ್ಯ ಕಾಡುತ್ತಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕಲ್ಲಡ್ಕ ಸರ್ವೀಸ್ ರಸ್ತೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿದೆ.
ಬೆಳಿಗ್ಗೆ ಹೊತ್ತಿಗೆ ಕೆಲಸಕ್ಕೆ ಹೋಗುವ ಪ್ರಯಾಣಿಕರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸರಿಯಾದ ಸಮಯಕ್ಕೆ ಕೆಲಸಕ್ಕೆ ಮತ್ತು ವಿದ್ಯಾರ್ಥಿಗಳಿಗೆ ಶಾಲೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ.
ಕಲ್ಲಡ್ಕದಲ್ಲಿ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಲಾಗುತ್ತಿದೆ.ಮೊದಲೇ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಪ್ಲೈ ಓವರ್ ಕಾಮಗಾರಿಗೆಂದು ಕಂಪೆನಿ ಘನಗಾತ್ರದ ವಾಹನಗಳನ್ನು ನಿಲ್ಲಿಸಿದರೆ ಸಮಸ್ಯೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇದರ ಜೊತೆಗೆ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಬಸ್ ಅಥವಾ ಇತರ ವಾಹನಗಳು ಜನರನ್ನು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ನಿಲ್ಲಿಸಿದರೆ ಮತ್ತೆ ಟ್ರಾಫಿಕ್ ಜಾಮ್ ಹೀಗೆ ನಿತ್ಯ
ತಾಸುಗಟ್ಟಲೆ ಟ್ರಾಫಿಕ್ ಸಮಸ್ಯೆ ಕಾಡುತ್ತಿರುವ ಬಗ್ಗೆ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…