ನಾಗಬನ ಹಾಗೂ ಮನೆಯ ಮೇಲೆ ಅಪಾಯಕಾರಿಯಾಗಿ ವಾಲುತ್ತಿದ್ದ ಮರ ಕಡಿಯುತ್ತಿದ್ದ ಮರ ಕಾರ್ಮಿಕರ ಮೇಲೆ ಉರುಳಿದ್ದರಿಂದ ಜಾರ್ಖಂಡ್ ಮೂಲದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಬಿಹಾರ-ಜಾರ್ಖಂಡ್ ಮೂಲದ ದಿನಗೂಲಿ ಕಾರ್ಮಿಕ ಸುಧೀರ್ ಪಂಜೆ ಮೃತ ವ್ಯಕ್ತಿ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಖಾಸಗಿ ಜಮೀನಿನ ಬಳಿ ಇರುವ ನಾಗಬನದ ಮೇಲೆ ವಾಲುತ್ತಿದ್ದ ಗೋಲಿಮರ ‘ಫಿಕಸ್ ಡ್ರುಪೇಸಿಯಾ ಹೆಬ್ಬೆಟ್ಟು’ ಎಂದು ಸ್ಥಳೀಯವಾಗಿ ಕರೆಯಲಾಗುವ ಬೃಹತ್ ಮರಕ್ಕೆ ಕೊಡಲಿ ಏಟು ಹಾಕಲಾಗುತ್ತಿದೆ.
ಮರ ಕಡಿಯುತ್ತಿದ್ದ ಮೂವರು ಕಾರ್ಮಿಕರು ಮರದ ಅವಶೇಷಗಳಡಿ ಸಿಲುಕಿಕೊಂಡರು. ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರನ್ನು ರಕ್ಷಿಸಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರದ ಕೆಳಗೆ ಮೃತಪಟ್ಟ ಕಾರ್ಮಿಕನನ್ನು ಹೊರತೆಗೆಯಲಾಗುತ್ತಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮರವನ್ನು ತೆಗೆಯಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಎಸ್‌ಐ ಅಬ್ದುಲ್ ಖಾದರ್, ಕ್ರೈಂ ಎಸ್‌ಐ ಪುರುಷೋತ್ತಮ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಿದ್ದ ಮರವನ್ನು ತೆಗೆಯಲು ಹಾಗೂ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ಸಹಕರಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…