ಭಾನುವಾರ ಸಂಜೆ ಕಾರಿನಲ್ಲಿ ಬಂದ ಅಪರಿಚಿತರಿಂದ ಇರಿತಕ್ಕೊಳಗಾದ ಕಾರ್ವಿಕೇರಿಯ ನಿವಾಸಿ ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ (42) ಸೋಮವಾರ ಬೆಳಗ್ಗೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಘವೇಂದ್ರ ಅವರು ತಮ್ಮ ಹೋಂಡಾ ಸಿಟಿ ಕಾರಿನಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಇಲ್ಲಿನ ಚಿಕನ್ ಸಾಲ್ ರಸ್ತೆಯಲ್ಲಿರುವ ಅಂಚೆ ಕಚೇರಿ ಬಳಿಯ ನವದೆಹಲಿ ಬಜಾರ್ ಬಳಿ ಬಂದರು. ಇದೇ ವೇಳೆ ಅವರ ವ್ಯಾಗನ್ ಆರ್ ನಲ್ಲಿ ಬಂದ ವ್ಯಕ್ತಿಯೊಬ್ಬ ರಾಘವೇಂದ್ರ ಜತೆ ಕೆಲಕಾಲ ವಾಗ್ವಾದ ನಡೆಸಿ ಆತನ ತೊಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ರಘು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬನ್ಸ್ ರಘು ಅಲಿಯಾಸ್ ರಾಘವೇಂದ್ರ ಶೇರೆಗಾರ್
ರಾಘವೇಂದ್ರನಿಗೆ ಚೂರಿಯಿಂದ ಇರಿದ ಸಂದರ್ಭ ಪ್ರತ್ಯಕ್ಷದರ್ಶಿಯೊಬ್ಬ ಆರೋಪಿಯ ಫೋಟೋ ಹಾಗೂ ಆತನ ಕಾರನ್ನು ತೆಗೆದಿದ್ದಾನೆ. ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಫಿ ಎಂದು ಪೊಲೀಸರು ಗುರುತಿಸಿದ್ದಾರೆ. ಕೆಲ ದಿನಗಳಿಂದ ಕುಂದಾಪುರದ ಲಾಡ್ಜ್‌ನಲ್ಲಿ ತಂಗಿದ್ದರು ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಶಫಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹಣಕಾಸಿನ ವಿಚಾರದಲ್ಲಿ ಚೂರಿ ಇರಿತ ನಡೆದಿರುವುದು ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ. ರಾಘವೇಂದ್ರ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…