ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ
ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ “ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ” ಕಾರ್ಯಕ್ರಮವನ್ನು ದಿನಾಂಕ 02.10.2023ರಂದು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೀವನದ ತ್ಯಾಗ, ಶಾಂತಿ, ಮತ್ತು ಅಹಿಂಸೆಯ ತತ್ವವು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ ಮಾತ್ರವಲ್ಲ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಮಹತ್ತರವಾದದ್ದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಶ್ರೀ ಗಣೇಶ್ ಜಿ ಬಂಗೇರ ರವರು ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಚಿಂತನೆಯ ವಿಚಾರವಾಗಿ ತಮ್ಮ ಅನಿಸಿಕೆಯನ್ನು ವಿವರಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ಪ್ರಸ್ತಾವನೆಗೈದು ಸ್ವಾಗತವನ್ನು ನಿರ್ವಹಿಸಿದ್ದರು, ಸಂಸ್ಥೆಯ ಕಾರ್ಯದರ್ಶಿ ಶ್ರೀ ಹಿಮಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ನವೀನ್ ಚಂದ್ರ ಅಮೀನ್, ಸದಸ್ಯರಾದ ಶ್ರೀ ಸುರೇಶ್ ಬಿ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಫೇಮಸ್ ಯೂತ್ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…