ಪಿರಿಯಾಪಟ್ಟಣ; ರೋಟರಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ವರ್ಣ ರಂಜಿತವಾಗಿ ನಡೆಯಿತು.
ಜೊತೆಗೆ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಪದಾಧಿಕಾರಿಗಳು ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿದರು. ಹಿರಿಯ ವಕೀಲ ಬಿ.ವಿ ದೇವೇಗೌಡ ಮಾತಾನಾಡಿ ಜವರೇಗೌಡರು ಗಾಂಧೀಜಿ ಬಗ್ಗೆ ಸವಿವರವಾಗಿ ಮಾತನಾಡಿ ಪ್ರಸ್ತುತ ಸನ್ನಿವೇಷದಲ್ಲಿ ಜಗತ್ತಿನಲ್ಲಿ. ಶಾಂತಿ ನೆಲೆಸಬೇಕಾದರೆ ಗಾಂಧೀಜಿಯ ಅಹಿಂಸಾ ತತ್ವದಿಂದ ಮಾತ್ರ ಸಾಧ್ಯ ಎಂದರು. ಅಧ್ಯಕ್ಷರಾದ ರಾಜೇಗೌಡ ಅವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಹಿರಿಯ ನಾಗರಿಕರಾದ ಮಹಮದ್ ಹಾಗೂ ಸಾವಿತ್ರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರಿಗೆ ಹಣ್ಣು ಹಂಪಲದ ಜೊತೆಗೆ ಅಗತ್ಯ ಔಷದೋಪಚಾರಕ್ಕೆ ಸ್ವಲ್ಪ ಹಣ ನೀಡಿ , ಅವರಿಗೆ ಮನೋಸ್ಥೈರ್ಯ ಹೆಚ್ಚಿಸಿ ವೃದ್ಧಾಪ್ಯದ ಸಹಜತೆಯ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯದರ್ಶಿ ಹೆಗ್ಗಡೆ ವಂದನಾರ್ಪಣೆ ಮಾಡಿದರು. ಈ ಕಾರ್ಯ ಕ್ರಮಕ್ಕೆ Dr ಪ್ರಕಾಶ್ ಬಾಬು ಸಾರ್ ಸಹಕಾರ ನೀಡಿದರು.
ಪಿರಿಯಾಪಟ್ಟಣದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…