ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಮೂಡುಬಿದಿರೆ: ಇಲ್ಲಿನ ಪವರ್ ಫ್ರೆಂಡ್ಸ್ ಬೆದ್ರ ಮತ್ತು ಕುಮಾರ್ ಎಲೆಕ್ಟ್ರಿಕಲ್ಸ್ ಇವುಗಳ ಸಹಭಾಗಿತ್ವದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಂಚೆ ಜನಸಂಪರ್ಕ ಅಭಿಯಾನ ಮಂಗಳವಾರ ನಾಗರಕಟ್ಟೆಯಲ್ಲಿ ನಡೆಯಿತು.

ವಿದ್ಯುತ್ ಗುತ್ತಿಗದಾರ ನವೀನ್ ಕರ್ಕೇರಾ ಅವರು ಉದ್ಘಾಟಿಸಿ ಮಾತನಾಡಿ ಉತ್ತಮ ಯೋಜನೆಗಳು ಇನ್ನಷ್ಟು ನೆರವೇರಲಿ ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಶುಭ ಹಾರೈಸಿದರು. ಪವರ್ ಫ್ರೆಂಡ್ಸ್ ನ ಅಧ್ಯಕ್ಷ
ವಿನಯ್ ಕುಮಾರ್ ಮಾತನಾಡಿ ಸಮಾಜಮುಖಿ ಕೆಲಸಗಳು ನಿರಂತವಾಗಿ ನಡೆಯಲಿ ಇದಕ್ಕೆ ಸಂಪೂರ್ಣವಾದ ಸಹಕಾರ ಪವರ್ ಫ್ರೆಂಡ್ಸ್ ಬೆದ್ರ ನೀಡುತ್ತದೆ ಎಂದರು.


ಭಾರತೀಯ ಅಂಚೆ ಇಲಾಖೆಯ ಗುರುಪ್ರಸಾದ್ ಕೆ.ಎಸ್ ಅಂಚೆ ಸೇವಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಲೆಕ್ಟ್ರಿಕಲ್ ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರಿಗೆ ಸಮೂಹ ಅಪಘಾತ ವಿಮೆಯನ್ನು ಮಾಡಿಸಲಾಯಿತು.

ಎಲೆಕ್ಟ್ರಿಕಲ್ ಸಂಸ್ಥೆಯ ಅಧ್ಯಕ್ಷ ಕುಮಾರ್ ಪೂಜಾರಿ ಉಪಸ್ಥಿತರಿದ್ದರು. ಪವರ್ ಫ್ರೆಂಡ್ಸ್ ನ ಉಪಾಧ್ಯಕ್ಷ, ವಕೀಲ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ಸ್ ನ ಉದ್ಯೋಗಿಗಳು ಮತ್ತು ಪವರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!