ಜನ ಮನದ ನಾಡಿ ಮಿಡಿತ

Advertisement

ಕಾರು ಚಾಲಕನ ಯಡವಟ್ಟು…! ಬೈಕ್ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡವರಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡು ತಲಪಾಡಿ ಕೆಎಸ್.ಆರ್.ಟಿ.ಸಿ‌.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿ.ಸಿ.ರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ.

ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!