ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡವರಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿ.ಸಿ.ರೋಡು ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡು ತಲಪಾಡಿ ಕೆಎಸ್.ಆರ್.ಟಿ.ಸಿ.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿ.ಸಿ.ರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ.
ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…