ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ. 28ರಂದು “ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾ ಕೂಟ” ಮತ್ತು ಅ. 29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ “ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮಗಳ ಕುರಿತ ಏಳನೇ ಪೂರ್ವಭಾವಿ ಸಭೆಯು ಬಂಟರ ಸಂಘ ಮುಂಬೈಯಲ್ಲಿ ಜರಗಿತು.
ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿ, ಜಯ ಎ. ಶೆಟ್ಟಿ, ಒಕ್ಕೂಟದ ಪೋಷಕ ಸದಸ್ಯರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಪ್ರವೀಣ್ ಶೆಟ್ಟಿ ವರಂಗ ಇವರುಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…