ಕಾರ್ಕಳ: 5 ದಿನಗಳ ಹಿಂದೆ ಕಾಣೆಯಾಗಿದ್ದ ಯುವಕನೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದೆ. ದುರ್ಗ ಗ್ರಾಮದ ಸಂದೇಶ್ ಶೆಟ್ಟಿ ಎಂಬವರು ನಾಪತ್ತೆಯಾಗಿದ್ದ ಯುವಕ. ಇವರ ಪತ್ತೆಗೆ ಮನೆಯವರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸಂದೇಶ್ ಶೆಟ್ಟಿ ಪತ್ತೆಯಾಗಿರಲಿಲ್ಲ. ಸಂದೇಶ್ ಶೆಟ್ಟಿ ಅವರ ಶವವು ಬುಧವಾರ ಬೆಳಗ್ಗೆ ಕಾವೇರಡ್ಕ ಬಳಿಯ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂದೇಶ್ ಶೆಟ್ಟಿ ನಾಪತ್ತೆ ದಿನವೇ ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದ್ದು ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ. ಸ್ಥಳೀಯರು ಕಾರ್ಕಳ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…