ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಮಾಜೆ ಕ್ರಾಸ್ ಬಳಿ ಇಂದು ನಡೆದಿದೆ.
ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ (58) ಮೃತಪಟ್ಟ ವ್ಯಕ್ತಿ.
ವಾಮದಪದವನಿಂದ ಅವರು ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದಕಾರು ಡಿಕ್ಕಿಯಾಗಿದೆ.ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ
ಮೃತರು ಅಡುಗೆ ವೃತ್ತಿಯವರಾಗಿದ್ದು,ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ, ಪುತ್ರ,ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…