ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.
ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…