ತೋಕೂರು ಸ್ಫೋರ್ಟ್ಸ್ ಕ್ಲಬ್: ಶ್ರೀ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜಿ ಅವರ ಜಯಂತಿ ಆಚರಣೆ ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ,ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ,ದ.ಕ ಜಿಲ್ಲೆ. ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ (ರಿ)ತೋಕೂರು, ಹಳೆಯಂಗಡಿ. ಇದರ ಆಶ್ರಯದಲ್ಲಿ ಸೋಮವಾರ ಶ್ರೀ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜಿಯವರ ಜಯಂತಿ ಆಚರಣೆಯನ್ನು ಸ್ಫೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಆಚರಿಸಲಾಯಿತು.




ವೇದಿಕೆಯಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಶ್ರೀಮತಿ ಬಿ .ಆರ್.ಗೀತಾ ,ಶ್ರೀಮತಿ ಸವಿತಾ ಶೆಟ್ಟಿ, ಸ್ಫೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ,ಸದಸ್ಯರು, ಸದಸ್ಯೆಯರು, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಮಹಿಳಾ ಸದಸ್ಯೆಯರಾದ ಶ್ರೀಮತಿ ಸುಷ್ಮಾ ಆಚಾರ್ಯ ಹಾಗೂ ಪವಿತ್ರಾ ಆಚಾರ್ಯ ಪ್ರಾರ್ಥಿಸಿದರು. ಶ್ರೀಮತಿ ಗೀತಾ ಶೆಟ್ಟಿಗಾರ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶ್ರೀ ಗಣೇಶ್ ದೇವಾಡಿಗ ವಂದಿಸಿದರು. ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



