ಕಾರ್ಕಳ : ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ ಮಹಾತ್ಮ ಗಾಂಧಿ ಜಯಂತ್ಯೋತ್ಸವ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಾಧನ ಜಿ. ಆಶ್ರೀತರವರು ಫ್ಯಾಷನ್ ಡಿಸೈನರ್, ಧಾರಾವಾಹಿ, ಚಲನ ಚಿತ್ರ, ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ರಾಜ್ಯಾದ್ಯಂತ ಕಾರ್ಯಕ್ರಮ ನೀಡಿದ್ದಾರೆ ಹಾಗೂ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ.
ನಾಡು, ನುಡಿ, ಸಂಸ್ಕೃತಿ, ಕಲೆ,ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…