ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.
ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…