ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ.,ಪತ್ರಾಂಕಿತ ವ್ಯವಸ್ಥಾಪಕರಾದ ನರೇಶ್ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್.,ನಗರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ಸವಿತಾ, ಕ.ರಾ.ಸ.ನೌ.ಸಂಘದ ಅಧ್ಯಕ್ಷ ನಾಗೇಶ್ ಎಸ್. ರವರು ಉಪಸ್ಥಿತರಿದ್ದರು.
ಬಿ.ಐ.ಈ.ಆರ್.ಟಿ ಸುಶೀಲಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಬಿ.ಐ.ಈ.ಆರ್.ಟಿ. ಜ್ಯೋತಿ ಡಿಸೋಜ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದ್ದರು. ಬಿ.ಐ.ಈ.ಆರ್.ಟಿ. ಫ್ಲೇವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದ್ದರು.ಸಿ.ಆರ್.ಪಿಗಳಾದ ಆದರ್ಶ, ದಿನಕರ, ಮಹೇಶ್ವರಿ ಎನ್.,ನಾಗರತ್ನ ಶಿರೂರು ಸಹಕರಿಸಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…