ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ.
2015 ರಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…