ಜನ ಮನದ ನಾಡಿ ಮಿಡಿತ

Advertisement

“ಹೃದಯದ ಆರೋಗ್ಯಕ್ಕೆ ಮುನ್ನೆಚ್ಚರಿಕೆ ಅವಶ್ಯ” –ಡಾ. ದಿತೇಶ್ ಎಂ.

ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬಂಧಿ ಕಾಯಿಲೆಗಳಲ್ಲಿ ಮೂರು ವಿಧಗಳು. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ಥಂಭನ.

ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ ನಡಿಗೆ, ಲಘು ವ್ಯಾಯಾಮ ಹಾಗೂ ಆಹಾರದಲ್ಲಿ ಪಥ್ಯವನ್ನು ಹೊಂದುವುದು ಉತ್ತಮ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೇ ಹೆಚ್ಚಾಗಿ ಹೃದಯ ಸಂಬಂಧೀ ಕಾಯಿಲೆಗಳಿಂದ ಸಾವನ್ನಪುವುದು ಅತ್ಯಂತ ಖೇದಕರ ಸಂಗಾತಿಯಾಗಿದೆ.

ಇವುಗಳಿಗೆ ಮುನ್ನೆಚ್ಚರಿಕೆಯೇ ಪರಿಹಾರ” ಎಂದು ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದಯ ತಜ್ಞರಾದ ಡಾ. ದಿತೇಶ್ ಎಂ. ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸವಿವರವಾದ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್‌ರವರು, ವಿದ್ಯಾರ್ಥಿ ಜೀವನದಿಂದಲೇ ಆರೋಗ್ಯದಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ತನ್ನ ಪರಿಸರದ ಜನರಲ್ಲಿ ಹೃದಯ ಸಂಬಂಧೀ ಕಾಯಿಲೆಗಳ ಕುರಿತಾಗಿ ಜಾಗೃತಿ ಮೂಡಿಸಬೇಕು ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!