ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ನೇತಾಡುತ್ತಿರುವುದು ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ ಖಚಿತಪಡಿಸಿರುವ ಕಾರಣ ಹಳ್ಳಿಯ ಗ್ರಾಮಸ್ಥರು ಮತ್ತು ರಬ್ಬರ್ ಟ್ಯಾಪರ್‌ಗಳಲ್ಲಿ ಆತಂಕ ಮನೆ ಮಾಡಿದೆ. ಮುಂಜಾನೆ ರಬ್ಬರ್ ಟ್ಯಾಪಿಂಗ್‌ಗೆ ಹೋದ ಕಾರ್ಮಿಕರು ತೋಟದ ಮಧ್ಯದ ರಬ್ಬರ್ ಮರವೊಂದರ ಮೇಲೆ ಸತ್ತ ದನದ ಕರು ನೇತಾಡು ತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ಕರುವಿನ ರುಂಡವು ಮರದ ಕೊಂಬೆಯ ಮಧ್ಯೆ ಸಿಲುಕಿದ್ದು, ಕೆಳಗೆ ಬೀಳದಂತೆ ಆಧಾರವಾಗಿತ್ತು. ಸತ್ತ ಕರುವಿನ ದೇಹದ ಒಂದಷ್ಟು ಭಾಗವನ್ನು ಸೀಳಿ ಮಾಂಸ ಹೊರ ತೆಗೆದು ಚಿರತೆ ತಿಂದಿದೆ. ಉಳಿದ
ಕೊಂಬೆಯಲ್ಲಿ ನೇತು ಹಾಕಿ ಪರಾರಿಯಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…