ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂ.1 ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.
ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…