ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.
ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.
ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…