ಮೀನುಗಾರಿಕೆ ಎಂಬುದು ಕರಾವಳಿ ಭಾಗದ ಪ್ರಮುಖ ಜೀವನೋಪಾಯ ಕಾಯಕ. ಮೀನುಗಾರರು ಈ ಭಾಗದ ಅತ್ಯಂತ ಶ್ರಮ ಜೀವಿ ಸಮುದಾಯ. ಸಮುದ್ರದ ಮೀನುಗಾರಿಕೆಯು ಅಪಾಯಕಾರಿ ವೃತ್ತಿಯಾಗಿದ್ದು ಅದನ್ನೇ ಸವಾಲಾಗಿ ಸ್ವೀಕರಿಸಿ ಬದುಕು ನಡೆಸಿಕೊಂಡು ಹೋಗುವವರು ಮೀನುಗಾರರು. ಈ ಸಮುದಾಯಗಳ ಸ್ವಾವಲಂಬಿ ಬದುಕಿಗೆ ಭದ್ರತೆ, ಆರ್ಥಿಕ ಸಹಾಯ, ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವುದು ಸರ್ಕಾರಗಳ ಕರ್ತವ್ಯ. ಆ ಮೂಲಕ ಕಡಲ ಮಕ್ಕಳ ಅಭಿವೃದ್ಧಿಗೆ ಎಲ್ಲ ಸರ್ಕಾರಗಳು ಬದ್ಧವಾಗಿರಬೇಕು.
ಅಂತಹ ಮೀನುಗಾರರ ಸುಭದ್ರ ಬದುಕಿಗೆ ನಮ್ಮ ಬಿಜೆಪಿ ಸರ್ಕಾರದ ಅವಧಿಯ 2023 ರ ಫೆಬ್ರುವರಿ ಬಜೆಟ್ ನಲ್ಲಿ ಕೆಲವು ವಿಶೇಷ ಯೋಜನೆಗಳನ್ನು ಘೋಷಿಸಲಾಗಿತ್ತು. ಅವು ಜಾರಿಯಾಗುವ ಹಂತದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ 2023ರ ಜುಲೈನಲ್ಲಿ ಹೊಸ ಬಜೆಟ್ ಘೋಷಿಸಿತ್ತು. ಆದರೆ ನಮ್ಮ ಸರ್ಕಾರ ಘೋಷಿಸಿದ್ದ ಬಹುತೇಕ ಎಲ್ಲಾ ವಿಶೇಷ ಯೋಜನೆಗಳನ್ನು ಕಡೆಗಣಿಸುವ ಮೂಲಕ ಮೀನುಗಾರರ ಬದುಕಿಗೆ ಹೊಡೆತ ನೀಡಿದ್ದಲ್ಲದೇ, ಇತ್ತೀಚೆಗೆ ಕಾಂಗ್ರೆಸ್ಸಿಗರು ತಮ್ಮ ಸರ್ಕಾರವು 100 ದಿನ ಪೂರೈಸುವಷ್ಟರಲ್ಲಿ ಮೀನುಗಾರರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಈಡೇರಿಸಿದೆ ಎಂದು ಹೇಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರ ಮೀನುಗಾರರ ಭರವಸೆ ಈಡೇರಿಸಿದ್ದು ಅಲ್ಲ, ಬದಲಿಗೆ ಕಡೆಗಣಿಸಿದ್ದು..!
ಕಾಂಗ್ರೆಸ್ ಪಕ್ಷದ ರಾಷ್ಟೀಯ ನಾಯಕ ರಾಹುಲ್ ಗಾಂಧಿಯವರು ಚುನಾವಣಾ ಸಂದರ್ಭ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ಮೀನುಗಾರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿದ್ದ ಸುಳ್ಳಿನ ಭರಪೂರ ಆಶ್ವಾಸನೆಗಳಲ್ಲಿ ಯಾವ ಭರವಸೆ ತಾನೇ ಈಡೇರಿದೆ ಎಂಬುದನ್ನು ಕಾಂಗ್ರೆಸ್ ನವರು ತಿಳಿಸಬೇಕು.
ಬಿಜೆಪಿ ಸರಕಾರದ ಬದ್ಧತೆ ಹಾಗೂ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷಕ್ಕೆ ಸಾಕ್ಷಿ ಈ ಬಜೆಟ್:
ನಮ್ಮ ಬಜೆಟ್ ನಲ್ಲಿ ನಾಡದೋಣಿ ಮೀನುಗಾರರಿಗೆ ಪೆಟ್ರೋಲ್/ ಡೀಸೆಲ್ ಚಾಲಿತ ಇಂಜಿನ್ ಗಳ ಖರೀದಿಗೆ 50 ಸಾವಿರ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ 40 ಕೋಟಿ ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಈ ಹಿಂದಿನ 40 ಕೋಟಿಯಲ್ಲಿ 20 ಕೋಟಿ ಕಡಿತಗೊಳಿಸಿ ಉಳಿದ 20 ಕೋಟಿಯನ್ನು ಮಾತ್ರ ನೀಡಲಾಗಿದೆ.
ನಮ್ಮ ಬಜೆಟ್ ನಲ್ಲಿ ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತಾ ದೃಷ್ಟಿಯಿಂದ ಇಸ್ರೋ ನಿರ್ಮಿತ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ದೋಣಿಗಳಲ್ಲಿ ಅಳವಡಿಸಿ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವ ಯೋಜನೆಗೆ 17 ಕೋಟಿ ರೂ.ಗಳ ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಈ ಯೋಜನೆಗೆ ಯಾವುದೇ ಅನುದಾನ ಒದಗಿಸದೇ ಮೀನುಗಾರರ ಸುರಕ್ಷತೆಯನ್ನೇ ಕಡೆಗಣಿಸಿದ್ದು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.
ನಮ್ಮ ಬಜೆಟ್ ನಲ್ಲಿ ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ದರದಲ್ಲಿ ನೀಡುತ್ತಿದ್ದ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್ ಗಳಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲಾಗಿತ್ತು. ಪ್ರಸ್ತುತ ಕಾಂಗ್ರೆಸ್ ಸರಕಾರ ಅದೇ ಯೋಜನೆಯನ್ನು ಮುಂದುವರಿಸಿದೆ ಹೊರತು ಯಾವುದೇ ಹೆಚ್ಚುವರಿ ಅನುದಾನ ನೀಡಿಲ್ಲ.
ಮತ್ಸ್ಯಾಶ್ರಯ ಯೋಜನೆಯಡಿಯಲ್ಲಿ ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಸರಕಾರದಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾವನೆಯೇ ಇಲ್ಲ.
ನಮ್ಮ ಬಜೆಟ್ ನಲ್ಲಿ ಮೀನಿನ ಸಂತತಿ ಕ್ಷೀಣಿಸುತ್ತಿರುವುದರಿಂದಾಗಿ ಬಲಿತ ಬಿತ್ತನೆ ಮೀನು ಮರಿಗಳನ್ನು ಕೆರೆ ಹಾಗೂ ಹಿನ್ನೀರು ಪ್ರದೇಶದಲ್ಲಿ ಬಿತ್ತನೆ ಮಾಡುವ ಯೋಜನೆಗೆ 20 ಕೋಟಿ ಅನುದಾನವನ್ನು ಒದಗಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಈ ಯೋಜನೆಗೆ ಯಾವುದೇ ಅನುದಾನ ಒದಗಿಸದೇ ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ನಮ್ಮ ಬಜೆಟ್ ನಲ್ಲಿ ಸಿಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಿ, ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು, ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಿಗಡಿ ಕೃಷಿ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವ ಬಗ್ಗೆ ಯೋಜನೆ ಮಾಡಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಈ ಅಂಶವನ್ನು ಕಡೆಗಣಿಸಲಾಗಿದೆ.
ಅಲ್ಲದೇ ಪ್ರಸ್ತುತ ಕೇಂದ್ರ ಬಿಜೆಪಿ ಸರ್ಕಾರದ ನೂತನ ಯೋಜನೆಯಾದ “ಪಿ.ಎಂ ವಿಶ್ವಕರ್ಮ” ಅಡಿಯಲ್ಲಿ ಮೀನುಗಾರರಿಗೆ boat building ಮತ್ತು ಮೀನುಗಾರಿಕಾ ಬಲೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ಘೋಷಣೆಯಾಗಿದ್ದು ಸದ್ಯದಲ್ಲೇ ಜಾರಿಯಾಗಲಿದೆ.
ಇನ್ನು ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಶನ್ ಚಾನೆಲ್ ಗಳಲ್ಲಿ ಮೀನುಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 20 ಕೋಟಿ ಅದರಲ್ಲೂ ಮಂಗಳೂರಿಗೆ 3.9 ಕೋಟಿಯನ್ನು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆಯನ್ನೂ ಪಡೆಯಲಾಗಿತ್ತು (ದಾಖಲೆಗಳನ್ನು ಲಗತ್ತಿಸಲಾಗಿದೆ). ನ್ಯಾಯಾಲಯದ ದಾವೆಗೆ ಸಂಬಂಧಿಸಿ ಕಾಮಗಾರಿ ವಿಳಂಬವಾಗಿ, ನಂತರ ಜೂನ್ ನಲ್ಲಿ ಕಾರ್ಯಾದೇಶವಾಗಿತ್ತು. ಆಗ ಮಳೆಗಾಲವಾದ್ದರಿಂದ ಸೆಪ್ಟೆಂಬರ್ ನಂತರ ಕಾಮಗಾರಿ ಆರಂಭವಾಗಲಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪವನ್ನೇ ಮಾಡದೇ ಕಡೆಗಣಿಸಿದ್ದಲ್ಲದೇ “ಹೂಳೆತ್ತುವ ಕಾಮಗಾರಿಗೆ 3.9 ಕೋಟಿಯನ್ನು ಮಂಜೂರು ಮಾಡಿದ್ದೇವೆ. ಶೀಘ್ರದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲಿದ್ದೇವೆ” ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದಾರೆ.
ಒಟ್ಟಾರೆಯಾಗಿ ಮೀನುಗಾರ ಸಮುದಾಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೇ ಕೇವಲ ನಮ್ಮ ಸರ್ಕಾರದ ಯೋಜನೆಗಳನ್ನೇ ಮುಂದುವರಿಸಿದ್ದು ಹಾಗೂ ಮೀನುಗಾರರ ಸುರಕ್ಷತೆ ಹಾಗೂ ಆರ್ಥಿಕ ಭದ್ರತೆಯಂತಹ ಅತ್ಯುತ್ತಮ ಯೋಜನೆಗಳಿಗೆ ಅನುದಾನ ಒದಗಿಸದೇ ಅವರ ಬದುಕನ್ನು ಕಡೆಗಣಿಸಿದ್ದೇ ಕಾಂಗ್ರೆಸ್ ಸರಕಾರ ಸಾಧನೆ. ಇವೆಲ್ಲದರ ಸಮಗ್ರ ಚಿತ್ರಣ ದಾಖಲೆಗಳ ಸಮೇತ ಎಲ್ಲರ ಮುಂದೆ ಇದೆ. ಯಾರು ಬೇಕಾದರೂ ಇದನ್ನು ಪರಾಮರ್ಶೆ ನಡೆಸಿ ನೋಡಬಹುದು.
ಎಲ್ಲಾ ಸವಲತ್ತುಗಳಿಂದಲೂ ಮೀನುಗಾರರನ್ನು ಕಡೆಗಣಿಸಿ ಈಗ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದೇವೆ ಎಂದರೆ ಇದಕ್ಕಿಂತ ಹಾಸ್ಯಾಸ್ಪದ ಇನ್ನೇನು ಇರಲು ಸಾಧ್ಯ? ಅಷ್ಟಕ್ಕೂ ಇವರ ಸುಳ್ಳನ್ನು ಯಾರೂ ಸಹ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಇದು ಬುದ್ಧಿವಂತರ ಜಿಲ್ಲೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…