ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಬಂಟರ ಸಂಘ ಮುಂಬೈಯಲ್ಲಿ ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಚಂದ್ರಹಾಸ್ ಶೆಟ್ಟಿ, ಒಕ್ಕೂಟದ ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಕೆ. ಪ್ರಕಾಶ್ ಶೆಟ್ಟಿಯವರಿಂದ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಉಳ್ತುರು ಮೋಹನದಾಸ್ ಶೆಟ್ಟಿ, ನಿರ್ದೇಶಕರಾದ ಶ್ರೀ ಕೆ. ಎಮ್. ಶೆಟ್ಟಿ ಮತ್ತು ಡಾ. ಆರ್. ಕೆ. ಶೆಟ್ಟಿ, ಪೋಷಕ ಸದಸ್ಯರಾದ ಶ್ರೀ ಪದ್ಮನಾಭ ಪಯ್ಯಡೆ, ಶಾಂತರಾಮ್ ಬಿ. ಶೆಟ್ಟಿ, ಪೋಷಕರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್, ಶ್ರೀ ಬಿ. ಆರ್. ಶೆಟ್ಟಿ, ಸಿ. ಎ. ಐ. ಆರ್. ಶೆಟ್ಟಿ, ಶ್ರೀ ನಿತ್ಯಾನಂದ ಹೆಗ್ಡೆ ಮತ್ತು ಸಿ. ಎ. ಹರೀಶ್ ಶೆಟ್ಟಿ ಇವರುಗಳು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…