ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ, ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ, ಇದರ ಆಶ್ರಯದಲ್ಲಿ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆ, ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ (ಪರಿಗಣಿಸಲ್ಪಟ್ಟ, ವಿಶ್ವವಿದ್ಯಾನಿಲಯ ದೇರಳಕಟ್ಟೆ) ಇವರ ಸಹಕಾರದೊಂದಿಗೆ, ಬುಧವಾರ ಬೆಳಿಗ್ಗೆ ಘಂಟೆ 9:30 ರಿಂದ “ದಂತ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ” ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ ತೋಕೂರು, ಹಳೆಯಂಗಡಿ ಇಲ್ಲಿ ನಡೆಯಿತು. ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ ದೇರಳಕಟ್ಟೆ. ಇಲ್ಲಿನ ಉಪನ್ಯಾಸಕರು ಡಾ. ಆತಿಫಾ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್ ಅವರು ಶಾಲಾ ವಿಧ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಪ್ರಾಥಮಿಕ ಆರೋಗ್ಯ ಕೇಂದ್ರ,ಅತ್ತೂರು, ಕೆಮ್ರಾಲ್ ಇಲ್ಲಿನ ಸುರಕ್ಷಾಧಿಕಾರಿ ಶ್ರೀಮತಿ ಮಾರ್ಗರೇಟ್ ಸುದರ್ಶಿನಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ, ಸ್ಪೋರ್ಟ್ ಕ್ಲಬ್ ನ ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ ಉಪಸ್ಥಿತರಿದ್ದರು ಈ ಅಭಿಯಾನದಲ್ಲಿ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಸಿಲ್ವಿಯಾ ಕುಟಿನ್ನೋ, ಶ್ರೀಮತಿ ಪ್ರೇಮಾ ಶೆಟ್ಟಿಗಾರ್, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೀನಾಕ್ಷಿ, ಸಹಾಯಕಿ ಶ್ರೀಮತಿ ಸುಜಾತಾ ಕುಲಾಲ್, ಸ್ಫೋರ್ಟ್ಸ್ ಕ್ಲಬ್ ನ ಶ್ರೀ ಸಂಜಯ್ ಕೋಟ್ಯಾನ್ , ಸದಸ್ಯರು, ಸದಸ್ಯೆಯರು, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಪಾಲ್ಗೊಂಡು ಸಹಕರಿಸಿದರು.
ದಂತ ಚಿಕಿತ್ಸಾ ಶಿಬಿರದಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲಾ ವಿಧ್ಯಾರ್ಥಿಗಳು ಸೇರಿ ಸುಮಾರು 25 ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…