ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಪಡುಪಣಂಬೂರು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕೊಲ್ಲೂರು, ಬಳ್ಕುಂಜೆ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ” ಆಯುಷ್ ಚಿಕಿತ್ಸಾ ಪದ್ಧತಿ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ಶಿಬಿರ” ಕಾರ್ಯಕ್ರಮವನ್ನು ದಿನಾಂಕ ಇಂದು ಅಪರಾಹ್ನ ಗಂಟೆ 2:30 ಕ್ಕೆ ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.




ಶಿಬಿರದಲ್ಲಿ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕೊಲ್ಲೂರು ಬಳ್ಕುಂಜೆ ಇಲ್ಲಿನ ವೈದ್ಯಾಧಿಕಾರಿಗಳಾದ ಡಾ. ಶೋಭಾ ರಾಣಿಯವರು ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ದೈನಂದಿನ ಬದುಕಿನಲ್ಲಿ ಆಯುರ್ವೇದದ ಬಳಕೆ ಹೆಚ್ಚಾಗಬೇಕು ಈ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸುವ ಕೆಲಸ ಯುವ ಸಂಘಟನೆಗಳಿಂದ ಆಗಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುತ್ತಾ ಅವಶ್ಯಕತೆ ಇರುವವರಿಗೆ ಸೂಕ್ತ ಔಷಧಿಯನ್ನು ವಿತರಿಸಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಯುರ್ವೇದ ವಿಭಾಗದ ವಿದ್ಯಾರ್ಥಿನಿಯರಾದ ಕುಮಾರಿ ದಿಲೀಮಾ ಹಾಗೂ ಕುಮಾರಿ ಮಂಜೀಮಾ ಉಪಸ್ಥಿತರಿದ್ದರು, ಸಂಜೀವಿನಿ ಒಕ್ಕೂಟದ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಗೀತಾ ತಲಪಾಡಿ ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸವಿತಾರವರು ಉಪಸ್ಥಿತರಿದ್ದು ಸ್ತ್ರೀಶಕ್ತಿ, ಸ್ವಸಹಾಯ ಗುಂಪು ಮತ್ತು ಸಂಜೀವಿನಿ ಗುಂಪುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳೆಯರು ಸ್ವಉದ್ಯೋಗದಿಂದ ಸದೃಢರಾಗಬೇಕು ಎಂದು ತಿಳಿಸಿದರು ಮತ್ತು ಸಂಜೀವಿನಿಯಿಂದ ಸಿಗಬಹುದಾದ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಉಪಾಧ್ಯಕ್ಷರಾದ ಭೋಜಕೋಟ್ಯಾನ್, ಕಾರ್ಯದರ್ಶಿ ಹಿಮಕರ್ ಮತ್ತು ಬಶೀರ್ ಕಲ್ಲಾಪುರವರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯದರ್ಶಿ ಕುಸುಮ ಎಚ್. ಕೋಟ್ಯಾನ್ ಮತ್ತು ಸಂಸ್ಥೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತವನ್ನು ನಿರ್ವಹಿಸಿದರು, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗಿಶ್ ರವರು ಧನ್ಯವಾದವನ್ನು ಅರ್ಪಿಸಿದರು, ಫೇಮಸ್ ಯೂತ್ ಕ್ಲಬ್ಬಿನ ಕ್ರೀಡಾ ಕಾರ್ಯದರ್ಶಿ ಶ್ರೀ ಸಂಪತ್ ಜೆ. ಶೆಟ್ಟಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು.



