ಕರಾವಳಿ

ಬಂಟ್ವಾಳ : ಸಿಪಿಐ ನಿಂದ ಜನಾಗ್ರಹ “ಕೊಟ್ಟ ಭರವಸೆ ಈಡೇರಿಸಿ” “ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ”

ರಾಜ್ಯ ಸರಕಾರ ಕೊಟ್ಟ ಭರವಸೆಗಳನ್ನು ಈಡೇರಿಸುವಂತೆ ಹಾಗೂ ಜನ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಪಕ್ಷದ ರಾಜ್ಯ ಮಂಡಳಿ ಕರೆಯಂತೆ ರಾಜ್ಯದಾದ್ಯಂತ ನಡೆಯುವ ಚಳುವಳಿಯ ಭಾಗವಾಗಿ ಶನಿವಾರ ಬಿ.ಸಿ.ರೋಡು ಮಿನಿ ವಿಧಾನ ಸೌಧದ ಎದುರು ಪಕ್ಷದ ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಜನಾಗ್ರಹ ಚಳುವಳಿ ನಡೆಯಿತು.

ಚಳುವಳಿಗಾರರನ್ನುದ್ದೇಶಿಸಿ ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್‌, ಸಿಪಿಐ ಮುಖಂಡ ವಿ.ಕುಕ್ಯಾನ್‌, ಪಕ್ಷದ ರಾಜ್ಯ ಮಂಡಳಿ ಸದಸ್ಯ ಎಂ.ಕರುಣಾಕರ ಮಾತನಾಡಿ ಕಳೆದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಾಡಳಿತದಿಂದ ರೋಸಿ ಹೋದ ರಾಜ್ಯದ ಜನತೆ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ತಂದಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಲವಾರು ಗ್ಯಾರಂಟಿಗಳನ್ನು ಜ್ಯಾರಿಗೆ ತಂದಿದೆ. ಸರಕಾರದ ಈ ನಡೆಯನ್ನು ಸಿಪಿಐ ಸ್ವಾಗತಿಸಿದೆ.

 ಅದರ ಜೊತೆಗೆ 6 ನೇ ಗ್ಯಾರಂಟಿಯಾಗಿ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ ಭರವಸೆಗಳು ಅನುಷ್ಠಾನಗೊಂಡಿಲ್ಲ ಎಂದ ಅವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಚಳುವಳಿಯ ನೇತೃತ್ವವನ್ನು ಪಕ್ಷದ ತಾಲೂಕು ಮುಖಂಡ ಬಿ.ಬಾಬು ಭಂಡಾರಿ, ಸಹಕಾರ್ಯದರ್ಶಿ ಪ್ರೇಮನಾಥ ಕೆ, ಕೋಶಾಧಿಕಾರಿ ಶ್ರೀನಿವಾಸ ಭಂಡಾರಿ, ಬಿ.ಎಂ ಹಸೈನಾರ್‌ ವಿಟ್ಲ, ರಾಮ ಮುಗೇರ, ಒ. ಕೃಷ್ಣ,  ಎಐವೈಎಫ್‌ ನ ನಾಯಕ ಹರ್ಷಿತ್‌, ಮೋಹನ್‌ ಅರಳ,  ಸೀತರಾಮ ಕನ್ಯಾನ, ಎನ್‌ ಎಫ್‌ ಐ ಡಬ್ಲ್ಯೂ ರಾಜ್ಯ ನಾಯಕಿ ಭಾರತಿ ಪ್ರಶಾಂತ್‌, ಉಮಾವತಿ ಕುರ್ನಾಡು,  ಶಮಿತಾ, ಮಮತಾ, ಕೇಶವತಿ,  ಮೋಹಿನಿ, ಸರೋಜಿನಿ ಕುರಿಯಾಳ, ಸಿಪಿಐ  ನಾಯಕರುಗಳಾದ ಮೋಹನ್‌ ಅರಳ, ದೇರಣ್ನ ಅನಂತಾಡಿ,  ಎಂಬಿ ಭಾಸ್ಕರ, ಚಂದಪ್ಪ ನಾವೂರು,ಗಿರಿಯಪ್ಪ ಅನಂತಾಡಿ,ಸೀತ ಅನಂತಾಡಿ,   ವಹಿಸಿದ್ದರು.

ಪಕ್ಷದ ತಾಲೂಕು ಕಾರ್ಯದರ್ಶಿ ಸುರೇಶ್‌ ಕುಮಾರ್‌ ಬಂಟ್ವಾಳ್‌ ಪ್ರಾಸ್ತಾವನೆಗೈದು  ಸ್ವಾಗತಿಸಿದರು,  ಪ್ರೇಮನಾಥ ಕೆ ವಂದಿಸಿದರು.

ವಿವಿಧ ಬೇಡಿಕೆಗಳು.
ಅಸಂಘಟಿತ ಕಾರ್ಮಿಕರಿಗೆ 6 ನೇ ಗ್ಯಾರಂಟಿಯಲ್ಲಿ ಘೋಷಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರೂ.15 ಸಾವಿರ ಮತ್ತು ಸಹಾಯಕಿಯರಿಗೆ ರೂ.10 ಸಾವಿರ ಗೌರವ ಧನ ಹೆಚ್ಚಳಗೊಳಿಸುವುದು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.8 ಸಾವಿರ ಮತ್ತು ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.6 ಸಾವಿರ ಗೌರವಧನ ಹೆಚ್ಚಿಸುವ ವಾಗ್ದಾನವನ್ನು ಈಡೇರಿಸಬೇಕು,
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯಿದೆ, ಎಪಿಎಂಸಿ ಕಾಯಿದೆಗಳನ್ನು ರದ್ದುಗೊಳಿಸಬೇಕು ಹಾಗೂ ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ವಾಪಾಸ್ಸು ಪಡೆಯಬೇಕು, ಕಾರ್ಮಿಕರ ದೈನಂದಿನ ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ವಿಸ್ತರಿಸಿ ಬಿಜೆಪಿ ಸರಕಾರ ಫ್ಯಾಕ್ಟರಿ ಕಾಯಿದೆಗೆ ತಂದಿದ್ದ ತಿದ್ದುಪಡಿಗಳನ್ನು ರದ್ದುಗೊಳಿಸಿ ಹಿಂದಿನಂತೆ ಕೆಲಸದ ಅವಧಿಯನ್ನು 8 ಗಂಟೆಗೆ ಮಿತಗೊಳಿಸಬೇಕು. ರಾತ್ರಿ ಪಾಲಿಯಲ್ಲಿ ಮಹಿಳೆಯರನ್ನು ದುಡಿಸುವ ಕಾನೂನು ತಿದ್ದುಪಡಿಯನ್ನು ಹಿಂಪಡೆಯಬೇಕು,
ಕಟ್ಟಡ ಕಾರ್ಮಿಕರ 2021-22 ನೇ ಸಾಲಿನ ಧೈಫಕ್ಷಣಿಕ ಅರ್ಜಿಗಳಿಗೆ ಕೂಡಲೇ ಸಹಾಯಧನ ಬಿಡುಗಡೆ ಮಾಡಿ ಪಿಂಚಣಿ ಅರ್ಜಿಗಳ ಮಂಜೂರಾತಿ ನಿಯಮಗಳನ್ನು ಸರಳಗೊಳಿಸಿ ಕಟ್ಟಡ ಕಾರ್ಮಿಕರ ಮನೆ ನಿರ್ಮಾಣಕ್ಕೆ ರೂ.5ಲಕ್ಷ ರೂಪಾಯಿ ಸಹಾಯಧನ ನೀಡಬೇಕು, ರಾಜ್ಯದ ಲಕ್ಷಾಂತರ ಬೀಡಿ ಮಜೂರರಿಗೆ ಕೇಂದ್ರ ವೆಲ್‌ ಫೇರ್‌ ಫಂಡ್‌ ವೈದ್ಯಕ್ಷೀಯ ಸೌಲಭ್ಯಗಳು ಸ್ಥಗಿತಗೊಂಡಿದ್ದು ರಾಜ್ಯ ಕಾರ್ಮಿಕರ ವಿಮಾ ನಿಗಮದಿಂದ ಎಲ್ಲಾ ವೈದ್ಯಕೀಯ ಸೌಲಭ್ಯ ಮತ್ತು ಸಹಾಯಧನ ಲಭಿಸುವಂತೆ ಕ್ರಮ ವಹಿಸಬೇಕು.
ರಾಜ್ಯದ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿ ಸರಕಾರಿ ಸೌಲಭ್ಯಗಳನ್ನು ವಿಸ್ತರಿಸಬೇಕು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಿಸಿ ಡಯಾಲಿಸಿಸ್‌ ಕೇಂದ್ರಗಳನ್ನು ಆರಂಭಿಸಬೇಕು,
ಮಹಿಳೆಯರ ವಿರುದ್ಧದ ದೌರ್ಜನ್ಯಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು, ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಪರಿಗಣಿಸಲು ಕ್ರಮ ವಹಿಸಬೇಕು, ವಸತಿ ಸಮಸ್ಯೆಗಳಿಗೆ ತೊಡಕಾಗಿರುವ ಅರಣ್ಯ ಕಾಯಿದೆಗಳ ವಿಧಿಗಳನ್ನು ತಿದ್ದುಪಡಿ ಮಾಡಬೇಕು, ಇವಲ್ಲದೆ ರಾಜ್ಯದ ಜನರ ಜ್ವಲಂತ ಸಮಸ್ಯೆಗಳಾದ ವಸತಿ ಸಮಸ್ಯೆಯ ಬಗ್ಗೆ ಸರಕಾರ ಗಮನಹರಿಸಬೇಕು ಪ್ರಮುಖವಾಗಿ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ನಿವೇಶನವಿಲ್ಲದೆ ವಸತಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಂಚಲು ಮುಂದಾಗಬೇಕು, ಸರಕಾರವೇ ಘೋಷಿಸಿರುವಂತೆ ರಾಜ್ಯದ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸರಕಾರವೇ ವಾಸಯೋಗ್ಯ ಮನೆಗಳನ್ನು ನಿರ್ಮಿಸಬೇಕು ಮೊದಲಾದ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

3 days ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…

3 days ago

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

3 days ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

3 days ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

3 days ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

3 days ago