ಮುಲ್ಕಿ:ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವರಿಗೆ ಹುಚ್ಚು ನಾಯಿ ಕಡಿತಕಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಹಳೆಯಂಗಡಿಯ ಕೊಳುವೈಲಿನ ನಿವಾಸಿಗ್ರಾಮ ಪಂಚಾಯತ್ ಬಳಿಯ ಟೈಲರ್, ಛಾಯಾ ಚಿತ್ರಗ್ರಾಹಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಹುಚ್ಚುನಾಯಿ ಕಡಿದಿದ್ದು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಹಳೆಯಂಗಡಿ ಗ್ರಾಮ ಪಂಚಾಯತ್ ಹುಚ್ಚುನಾಯಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



