ಮೂಡಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ.
ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್ ನಿಂದ ಬೀಪಾತಿಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಆಳ್ವಾಸ್ ಕಾಲೇಜಿನ ಬಸ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ತೀವೃವಾಗಿ ಗಾಯಗೊಂಡ ಆಲಿಯಮ್ಮ ಕೊನೆಯುಸಿರೆಳೆದಿದ್ದಾರೆ. ಉಳಿದಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ದ್ದಾರೆ. ಬಸ್ಸಿನ ಚಾಲಕ ಸಂದೇಶ್ ನಾಯ್ಕ್ ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…