ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ‘ಕುದ್ರು’ ಚಿತ್ರಕ್ಕೆ ಎಲ್ಲಿಲ್ಲದ ಬೇಡಿಕೆ..; ಅ.13 ರ0ದು ‘ಕುದ್ರು ಸಿನಿಮಾ’ ಕರ್ನಾಟಕದಾದ್ಯಂತ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಭಾಸ್ಕರ್ ನಾಯ್ಡ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, “ಕುದ್ರು’ ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ, ಆ ಸಮಯದಲ್ಲಿ ಸಂದೇಶವೊAದು ಬಂದು ಎಲ್ಲರಲ್ಲೂ ಮನಸ್ತಾಪ ಮೂಡುತ್ತದೆ. ಅನಂತರ ಕುತೂಹಲ ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಟ್ರೇಲರ್, ಹಾಗೂ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಜೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್, ಮಂಗಳೂರಿನ ನಮಿತಾ ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ನಟಿಸಿದ್ದಾರೆ. ಕುದ್ರು ಚಿತ್ರದಲ್ಲಿ ನಾಯಕನಾಗಿ ಆಗಿ ಹರ್ಷಿತ್ ಶೆಟ್ಟಿ ಮಿಂಚಿದ್ದು, ನಾಯಕಿಯಾಗಿ ಪ್ರಿಯಾ ಹೆಗ್ಡೆ ಅಭಿನಯಿಸಿದ್ದಾರೆ. ಇನ್ನೂ ಚಿತ್ರಕ್ಕೆ ಪುರಾಣಿಕ್, ಪ್ರದೀಪ್ ಹಾಗೂ ಉಡುಪಿ ಪ್ರಜ್ವಲ್, ಇವರ ಛಾಯಗ್ರಾಹಣವಿದ್ದು, ಪ್ರತೀಕ್‌ರವರ ಸಂಗೀತ ನಿರ್ದೇಶನವಿದೆ. ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ ಕುದ್ರು ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!