ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಭಾಸ್ಕರ್ ನಾಯ್ಡ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, “ಕುದ್ರು’ ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ, ಆ ಸಮಯದಲ್ಲಿ ಸಂದೇಶವೊAದು ಬಂದು ಎಲ್ಲರಲ್ಲೂ ಮನಸ್ತಾಪ ಮೂಡುತ್ತದೆ. ಅನಂತರ ಕುತೂಹಲ ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಟ್ರೇಲರ್, ಹಾಗೂ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.
ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಜೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್, ಮಂಗಳೂರಿನ ನಮಿತಾ ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ನಟಿಸಿದ್ದಾರೆ. ಕುದ್ರು ಚಿತ್ರದಲ್ಲಿ ನಾಯಕನಾಗಿ ಆಗಿ ಹರ್ಷಿತ್ ಶೆಟ್ಟಿ ಮಿಂಚಿದ್ದು, ನಾಯಕಿಯಾಗಿ ಪ್ರಿಯಾ ಹೆಗ್ಡೆ ಅಭಿನಯಿಸಿದ್ದಾರೆ. ಇನ್ನೂ ಚಿತ್ರಕ್ಕೆ ಪುರಾಣಿಕ್, ಪ್ರದೀಪ್ ಹಾಗೂ ಉಡುಪಿ ಪ್ರಜ್ವಲ್, ಇವರ ಛಾಯಗ್ರಾಹಣವಿದ್ದು, ಪ್ರತೀಕ್‌ರವರ ಸಂಗೀತ ನಿರ್ದೇಶನವಿದೆ. ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ ಕುದ್ರು ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…