ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್ ವಹಿಸಿದ್ರು. ಗ್ರಾಮ ಸಭೆಯಲ್ಲಿ ಪಂಚಾಯತ್ ವ್ಯಾಪ್ತಿಯ ಲೈಟ್ ಹೌಸ್ ಬಳಿಯ ಓಂಕಾರೇಶ್ವರ ಪರಿಶಿಷ್ಟ ಜಾತಿ ಪಂಗಡದ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಬಹಳಷ್ಟು ಇದ್ದರೂ ಪಂಚಾಯತ್ ಕ್ಯಾರೇ ಮಾಡುತ್ತಿಲ್ಲ, ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಕಳೆದ ಹಲವಾರು ವರ್ಷಗಳಿಂದ ಪೂರ್ತಿಗೊಂಡಿಲ್ಲ, ಕಳಪೆ ಕಾಮಗಾರಿ ನಡೆದಿದ್ದು, ಈ ಬಗ್ಗೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಗ್ರಾಮಸ್ಥ ಸದಾಶಿವ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬAಧಪಟ್ಟ ಅಧಿಕಾರಿಗಳು ಉತ್ತರವನ್ನು ನೀಡಿದ್ದಾರೆ.



