ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಳಿ ಮರದ ಕೊಪ್ಪಲು ಗ್ರಾಮದಲ್ಲಿ ಕಿತ್ತೂರು ಗ್ರಾಮ ಪಂಚಾಯಿತಿ ಹಾಗೂ ಸಂಗರಶೆಟ್ಟಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಡೆಂಗ್ಯೂ, ಹಾಗೂ ಚಿಕನ್ ಗುನ್ಯಾ ತಡೆಗಟ್ಟಲು ಗ್ರಾಮದ ಎಲ್ಲಾ ಬೀದಿಗಳಲ್ಲಿ ಫಾಗಿಂಗ್ ಸಿಂಪಡಣೆ ಮಾಡಲಾಯಿತು.

ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ ಈ ಗ್ರಾಮದಲ್ಲಿ ಚಿಕ್ಕ ಮಗುವಿಗೆ ಡೆಂಗ್ಯೂ ಪ್ರಕರಣ ಕಂಡುಬAದಿದ್ದರಿAದ, ಗ್ರಾಮವನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಿದ್ದೇವೆ. ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಪಾಗಿಂಗ್ ಸಿಂಪಡಣೆ ಮಾಡಿದ್ದೇವೆ. ಆರೋಗ್ಯ ಸಿಬ್ಬಂದಿಗಳು ಕೂಡ ಪ್ರತಿ ಮನೆ ಮನೆಗೂ ಭೇಟಿ ನೀಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮಾಹಿತಿ ನೀಡಿದ್ದಾರೆ. ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಂಗರ ಶೆಟ್ಟಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾಧಿಕಾರಿ ಅಧಿಕಾರಿ ಉಷಾ, ಗ್ರಾಮ ಪಂಚಾಯತಿ ಸದಸ್ಯ ನಟರಾಜ್, ಸಮುದಾಯ ಆರೋಗ್ಯ ಅಧಿಕಾರಿ ರೇಖಾ, ಪ್ರಾಥಮಿಕ ಸುರಕ್ಷತಾಧಿಕಾರಿ ಸುಚಿತ್ರ, ಪಂಚಾಯತಿ ಸಿಬ್ಬಂದಿ ಮಹೇಶ್, ಆಶಾ ಕಾರ್ಯಕರ್ತೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



