ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28/10/2023 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ದಿನಾಂಕ 29/10/2023 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಿನ್ನೆ ಸಿಲ್ವರ್ ಬಿಲ್ಸ್ ಬ್ಯಾಂಕೆಟ್ ಹಾಲ್, ಗೋಲ್ಡ್ ಫಿಂಚ್ ಹೋಟೆಲ್, ಬಂಟ್ಸ್ ಹಾಸ್ಟೆಲ್ ರಸ್ತೆ ಮಂಗಳೂರು ಇಲ್ಲಿ ಬಿಡುಗಡೆ ಮಾಡಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ರಮಾನಾಥ್ ರೈ, ಸಂಸದರು ನಳಿನ್ ಕುಮಾರ್ ಕಟೀಲ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಎ. ಸದಾನಂದ ಶೆಟ್ಟಿಯವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಪೋಷಕ ಸದಸ್ಯರಾದ ಸುಧಾಕರ್ ಪೂಂಜ, ಲೋಕೇಶ್ ಶೆಟ್ಟಿ, ಜಗನ್ನಾಥ್ ಚೌಟ, ಜೈರಾಜ್ ರೈ ಅಧ್ಯಕ್ಷರು ರಾಮಕೃಷ್ಣ ಕ್ರೆಡಿಟ್ ಕೂಪೆರೇಟಿವ್ ಸೊಸೈಟಿ, ಪ್ರಿಥ್ವಿರಾಜ್ ರೈ ಕಾನೂನು ಸಲಹೆಗಾರರು, ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಮಾಧ್ಯಮ ಮಿತ್ರರು, ಒಕ್ಕೂಟದ ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…