ಬ0ಟ್ವಾಳ; ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ, ಕಾಂಕ್ರೀಟ್ ಮಿಕ್ಸರ್ ಯಂತ್ರವೊ0ದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.
ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.
ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.
ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…