ಜನ ಮನದ ನಾಡಿ ಮಿಡಿತ

Advertisement

ತಾಪಮಾನ ಏರಿಕೆ, ಬೆಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆ ನೀಡಿತು ಎಚ್ಚರಿಕೆ!!!

ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.


     ಸಾಮಾನ್ಯಕ್ಕಿಂತ  09% ತಾಪಮಾನ ಏರಿಕೆಯಾಗಲಿದ್ದು  ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
 ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
      ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ  ಮಣ್ಣಿನಲ್ಲಿ  ತೇವಾಂಶ ಕಡಿಮೆಯಾಗಿ  ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.

ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
   ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ  ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!