ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸಾಮಾನ್ಯಕ್ಕಿಂತ 09% ತಾಪಮಾನ ಏರಿಕೆಯಾಗಲಿದ್ದು ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.
ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…