ಬಜಪೆ:ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು ಗ್ರಾಮದ ಪೋರ್ಕೊಡಿ,ಕೊಳಂಬೆ ಫನಾ ಕಾಲೇಜು ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಐವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್, ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್, ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯಿದ್ದೀನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮೊಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.
ಪೊಲೀಸರುಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪರೀಕ್ಷಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುದರಿಂದ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರವನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿ ಮಾಡಲು ದೃಢನಿರ್ಧಾರವನ್ನು ಕೈಗೊಂಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ IPS, ಡಿ.ಸಿ.ಪಿಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ರವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…