ಕಲ್ಲಡ್ಕ : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ.
ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿ.ಸಿ. ರೋಡಿನಿಂದ ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…