ಬಂಟ್ವಾಳ; ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳಾ ಪ್ರಯಾಣಿಕೆಯೋರ್ವಳು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯರನ್ನು ರಾಜೀವಿ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ, ಸರಕಾರಿ ಶಿಶಿಲ ಬಸ್‌ಗೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ, ಲಾರಿಯೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…