ಕರಾವಳಿ

ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು; ಗ್ರಾಮ ಸಭೆ ರದ್ದು..!

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ಗುರುವಾರ ನಡೆದಿದೆ.


ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ ತೋಡಾರಿನ ರ‍್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯುತ್ತಿದ್ದ ಸಂರ‍್ಭದಲ್ಲಿ ಗ್ರಾಮಸ್ಥರು ಮಾತನಾಡಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಬಂದಿದ್ದು ಉಳಿದ ಅಧಿಕಾರಿಗಳು ಯಾಕೆ ಭಾಗವಹಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮಾಜಿ ಸದಸ್ಯ ಜಯರಾಮ್ ಬಂಗೇರ ಮಾತನಾಡಿ, ಗ್ರಾಮಸಭೆಯಲ್ಲಿ ಅತಿ ಅಗತ್ಯವಾಗಿ ಇರಬೇಕಾದ ಗ್ರಾಮಕರಣಿಕರು, ಮೆಸ್ಕಾಂ, ಪಶುಸಂಗೋಪನೆ ಸಹಿತ ಪ್ರಮುಖ ಇಲಾಖೆಗಳ ಅಧಿಕಾರಿಗಳೇ ಬಂದಿಲ್ಲ. ವಿವಿಧ ಇಲಾಖೆಯ ಸಮಸ್ಯೆಗಳ ಕುರಿತು, ಆ ಇಲಾಖೆಗಳ ಮಾಹಿತಿಯನ್ನು ಪಂಚಾಯತ್ ಅಧಿಕಾರಿಗಳು, ಸದಸ್ಯರು ನೀಡಲು ಸಾಧ್ಯವೇ?. ಗ್ರಾಮಸಭೆಗೆ ಕನಿಷ್ಠ 15 ಇಲಾಖೆಗಳ ಅಧಿಕಾರಿಗಳು ಇರಬೇಕು ಎಂದು ಹೇಳಿದರು. ಜನರಿಗೆ ಅಗತ್ಯ ಮಾಹಿತಿಗಾಗಿ ಬೇಕಾದಂತಹ ಅಧಿಕಾರಿಗಳು ಇರದಿದ್ದರಿಂದ ಸಭೆಯನ್ನು ರದ್ದುಗೊಳಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.


ಈ ಕುರಿತು ಗ್ರಾಮಸ್ಥರು ಪ್ರಶ್ನಿಸುವ ವೇಳೆ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಾಮಕಿ ನಡೆದಿದೆ.


ಜಯರಾಮ್ ಬಂಗೇರ, ಪ್ರವೀಣ್, ಆನಂದ, ಪ್ರಶಾಂತ್, ರಾಜೇಶ್ ನಾಯ್ಕ್, ಮೋಹನ ನಾಯ್ಕ್ ಪಂಜ ವಿಚಾರಕ್ಕೆ ಪೂರಕವಾಗಿ ಮಾತನಾಡಿದರು. ಉಳಿದ ಗ್ರಾಮಸ್ಥರು ಧ್ವನಿಗೂಡಿಸಿದರು.


ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆಗಬೇಕಾದ ಯಾವುದೇ ಕೆಲಸಗಳು ಆಗ್ತಾ ಇಲ್ಲ. ಗ್ರಾಮಸಭೆಯಲ್ಲಾದರೂ ಈ ಬಗ್ಗೆ ಕೇಳೋಣವೆಂದರೆ ಅಧಿಕಾರಿಗಳೇ ಇಲ್ಲ ಎಂದು ಗ್ರಾಮಸ್ಥ ಶಂಕರ್ ನಾಯ್ಕ್ ಹೇಳಿದರು.


ಗ್ರಾಮಸ್ಥರು ಹಾಗೂ ಸದಸ್ಯರ ನಡುವೆ ತೀವ್ರವಾಗಿ ಮಾತಿನ ಚಕಾಮಕಿ ಉಂಟಾದಾಗ ಮಧ್ಯಪ್ರವೆಶಿಸಿದ ನೋಡೆಲ್ ಅಧಿಕಾರಿ ಶೈಲಾ ಕೆ. ಕಾರಿಗಿ, ಎಲ್ಲರೂ ಒಟ್ಟಾಗಿ ಮಾತನಾಡಿದರೆ ಸಮಸ್ಯೆಗಳು ರ‍್ಥವಾಗುವುದಿಲ್ಲ. ಒಬ್ಬೊಬ್ಬರು ತಮ್ಮ ಸಮಸ್ಯೆಗಳನ್ನು ತಿಳಿಸಬೇಕು. ಗ್ರಾಪಂ ಗೈರಾದ ಅಧಿಕಾರಿಗಳ ಇಲಾಖೆಗಳಿಗೆ ನೋಟಿಸ್ ನೀಡಲಾಗುವುದು. ಈ ಸಂರ‍್ಭದಲ್ಲಿ ಸಭೆ ನಡೆಸುವುದು ಅಸಾಧ್ಯ. ಮುಂದೂಡೋಣ ಎಂದರು.


ಸಭೆಯನ್ನು ರದ್ದುಪಡಿಸಿದ ಬಳಿಕ ಗ್ರಾಮಸ್ಥರು ಹಾಗೂ ಸದಸ್ಯರ ನಡುವೆ ವೈಯಕ್ತಿಕ ವಿಚಾರವನ್ನಿಟ್ಟುಕೊಂಡು ಮಾತಿನ ಚಕಾಮಕಿ ನಡೆಯಿತು.


ಪಿಡಿಒ ಶೇಖರ್, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

18 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

18 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

18 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

18 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

18 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

18 hours ago