ಉಡುಪಿ: ಬೈಲೂರು ಉಮಿಕಲ್ ಬೆಟ್ಟದ ಮೇಲೆ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಪರುಶುರಾಮನ ನಕಲಿ ಮೂರ್ತಿಯನ್ನು ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆಯನ್ನುಂಟು ಮಾಡಿದ್ದಾರೆ. ಇದೀಗ ನಕಲಿ ಮೂರ್ತಿಯನ್ನು ತೆರವುಗೊಳಿಸಿ ಹೊಸ ಮೂರ್ತಿಯನ್ನು ಮತ್ತೆ ಪ್ರತಿಷ್ಠಾಪಿಸುವ ಕೆಲಸ ಆರಂಭಿಸಿದ್ದಾರೆ. ಇದು ಮುಂಬರುವ ಚುನಾವಣೆಯಲ್ಲಿ ಮತಪಡೆಯಲು ಮಾಡಿರುವ ಹುನ್ನಾರ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
1.58 ಎಕ್ರೆ ಗೋಮಾಳದಲ್ಲಿ ಅಕ್ರಮವಾಗಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿ ಚುನಾವಣೆ ಉದ್ದೇಶದಿಂದ ಅವಸರದಲ್ಲಿ ಥೀಮ್ ಪಾರ್ಕ್ ಅನ್ನು ಉದ್ಘಾಟಿಸಲಾಗಿತ್ತು. ದೊಡ್ಡಮಟ್ಟದ ಪ್ರಚಾರ ಕೊಟ್ಟು ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಸುನೀಲ್ ಕುಮಾರ್ ಅವರ ನಿಜ ಬಣ್ಣ ಬಯಲಾಗಿದೆ. ಅರ್ಧ ಭಾಗವಷ್ಟೇ ಕಂಚಿನ ಪ್ರತಿಮೆಯಾಗಿದ್ದು ಉಳಿದ ಅರ್ಧ ಭಾಗವು ಸಿಮೆಂಟ್ ಅಥವಾ ಇತರ ಯಾವುದೇ ವಸ್ತುವಿನಿಂದ ನಿರ್ಮಿಸಿರುವುದು ಸಾಬೀತಾಗಿದೆ.
ಇದು ಹಿಂದೂಗಳು ಪೂಜಿಸಿಕೊಂಡು ಬಂದಿರುವ ಪರಶುರಾಮ ದೇವರಿಗೆ ಮಾಡಿದ ದ್ರೋಹ. ಸದಾ ಹಿಂದುತ್ವ ಎಂದು ಬಡಾಯಿಕೊಚ್ಚುವ ಸುನೀಲ್ ಕುಮಾರ್ ಅವರು ತಮ್ಮ ಲಾಭಕ್ಕಾಗಿ ಯಾವುದೇ ರೀತಿಯ ಮೋಸ ಮಾಡಲು ಸಿದ್ದ ಎನ್ನುವುದು ಈ ಘಟನೆಯಿಂದ ಸಾಬೀತಾಗಿದೆ.
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಕೂಡ ಇದು ಕಂಚಿನ ಮೂರ್ತಿಯಲ್ಲ ಎಂದು ಒಪ್ಪಿಕೊಂಡಿದ್ದರು. ಅದರ ಬಳಿಕ ಕಳೆದೆರಡು ದಿನಗಳಿಂದ ನೈಜ ಮೂರ್ತಿಯ ಭಾಗಗಳು ದೊಡ್ಡ ದೊಡ್ಡ ಲಾರಿಗಳಲ್ಲಿ ಕಾರ್ಕಳಕ್ಕೆ ಆಗಮಿಸಿದ್ದು ಮೂರ್ತಿಯ ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ. ಕಾರ್ಕಳ ಹಾಗೂ ಉಡುಪಿ ಜಿಲ್ಲೆಯ ಜನರಿಗೆ ಇಷ್ಟೊಂದು ದೊಡ್ಡ ಮೋಸ ಮಾಡಿದ್ದಲ್ಲದೆ ಹಿಂದೂಗಳ ಭಾವನೆಗಳೊಂದಿಗೆ ಆಟವಾಡಿರುವ ಬಿಜೆಪಿಯ ಶಾಸಕ ಸುನೀಲ್ ಕುಮಾರ್ ಅವರು ಇದಕ್ಕೆ ನೇರ ಹೋಣೆಗಾರರಾಗಿದ್ದಾರೆ. ಈಗಾಗಲೇ ಹಳೆಯ ಮೂರ್ತಿಗಾಗಿ ಹಣವನ್ನು ಕೂಡ ಪಾವತಿಸಲಾಗಿದ್ದು, ಮತ್ತೆ ಹೊಸ ಮೂರ್ತಿ ಪ್ರತಿಷ್ಠಾಪನೆ ಹೆಸರಿನಲ್ಲಿ ದುಂದುವೆಚ್ಚ ಮಾಡಲಾಗುತ್ತಿದೆ. ಇದೆಲ್ಲವುದರ ಬಗ್ಗೆ ವಿಸ್ತ್ರತ ತನಿಖೆಯ ನಡೆಯಬೇಕು. ಇದರಿಂದ ಆಗಿರುವ ನಷ್ಟವನ್ನು ಸ್ವತಃ ಸುನೀಲ್ ಕುಮಾರ್ ಅವರು ತಮ್ಮ ವೈಯುಕ್ತಿಕ ಖರ್ಚಿನಿಂದ ನೀಡಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಹಿಂದುತ್ವದ ಹೆಸರಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡಿರುವ ಶಾಸಕ ಸುನೀಲ್ ಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…