ಉಡುಪಿ; ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ, ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಪತ್ತೆಯಾಗಿದೆ.
ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ ಎಂದು ಗುರುತಿಸಲಾಗಿದೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಪಾಪನಾಶಿನಿ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅ.9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ವಾಪಾಸ್ ಬರದೇ ಇರುವ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎ0 ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿ0ದ ಕೆಲಸ ಮಾಡಿಕೊಂಡಿದ್ರು. ಆದರೆ ವಾರದ ಹಿಂದೆಯಷ್ಟೇ ಕೆಲಸಬಿಟ್ಟಿದ್ದಾರೆ.
ಇನ್ನೂ ಯುವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…