ಕಿನ್ನಿಗೋಳಿ: ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ದ. ಕ. ಜಿಲ್ಲೆ ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ಗೆ ಮಂಗಳವಾರದಂದು ಡಾ| ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿಯ ಕೋಟತಟ್ಟು ಗ್ರಾಮ ಪಂಚಾಯತಿನ ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಅವರು ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರಿಗೆ ಡಾ| ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸರ್ವಸದಸ್ಯರು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.



