ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ, ಇದರ ಆಶ್ರಯದಲ್ಲಿ ಸಮುದಾಯ ದಂತ ವಿಭಾಗ,ಯೆನೆಪೋಯ ದಂತ ಕಾಲೇಜು , ಆಸ್ಪತ್ರೆ, ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ,ಯೆನೆಪೋಯ (ಪರಿಗಣಿಸಲ್ಪಟ್ಟ, ವಿಶ್ವವಿದ್ಯಾನಿಲಯ ದೇರಳಕಟ್ಟೆ) ಇವರ ಸಹಕಾರದೊಂದಿಗೆ, ಬುಧವಾರ ಬೆಳಿಗ್ಗೆ ಘಂಟೆ 11:00 ರಿಂದ “ದಂತ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ” ಅನುದಾನಿತ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ ,ಸುಬ್ರಹ್ಮಣ್ಯ ನಗರ, 10ನೇ ತೋಕೂರು ಇಲ್ಲಿ ನಡೆಯಿತು.

ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ ದೇರಳಕಟ್ಟೆ. ಇಲ್ಲಿನ ಉಪನ್ಯಾಸಕರು ಡಾ!ಆತಿಫಾ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್ ಅವರು ಶಾಲಾ ವಿಧ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಅಭಿಯಾನದಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗೌರಿ, ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಮೋಹಿನಿ, ಶ್ರೀಮತಿ ಸರಿತಾ, ಶ್ರೀಮತಿ ವಾಣಿಶ್ರೀ, ಶ್ರೀಮತಿ ಯಶವಂತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರೇಮಲತಾ ಸಹಾಯಕಿ ಶ್ರೀಮತಿ ವಿಶಾಂತಿ ಸ್ಫೋರ್ಟ್ಸ್ ಕ್ಲಬ್ ನ ಸದಸ್ಯರು,ಸದಸ್ಯೆಯರು, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಪಾಲ್ಗೊಂಡು ಸಹಕರಿಸಿದರು.
ದಂತ ಚಿಕಿತ್ಸಾ ಶಿಬಿರದಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲಾ ವಿಧ್ಯಾರ್ಥಿಗಳು ಸೇರಿ ಸುಮಾರು 60 ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡರು.







