ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಕಂಬಳಕ್ಕೆ ಹೊಸ ನಿಯಮ ಅನ್ವಯ, ವಿವರ ಇಲ್ಲಿದೆ…

ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.

ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

      ನವೆಂಬರ್‌ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ  5,000  ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!