ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ “ಗಾಂಧಿ ಗ್ರಾಮ ಪುರಸ್ಕಾರ” ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಇಂದು ಅಭಿನಂದಿಸಲಾಯಿತು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…